Saturday, April 19, 2025
HomeUncategorizedಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಕ್ರಮ ಗೋ ಮಾಂಸ ಸಾಗಾಟ ; ಇಬ್ಬರು ಅರೆಸ್ಟ್

ಮಂಗಳೂರು : ಭಜರಂಗದಳದ ಮಿಂಚಿನ ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇವಸ್ಥಾನದ ದ್ವಾರದ ಬಳಿ ಇಂದು (ಮಾ.10) ಮುಂಜಾನೆ ನಡೆದಿದೆ.

ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿದ್ದು, ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ.

ಬಳಿಕ ಗೋ ಮಾಂಸ ಪತ್ತೆಯ ಕುರಿತು ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಪ್ತಿ ಮಾಡಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular