
ಕಾಪು ವಿಧಾನಸಭಾ ಕ್ಷೇತ್ರದ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ 1 ಕೋಟಿ 10 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 22-10-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.
ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾನಾರಬೆಟ್ಟು ಕಡ್ತೂರು ಬೈಲು ರಸ್ತೆ ಅಭಿವೃದ್ಧಿ – 30 ಲಕ್ಷ, ಚೆಂಡಡ್ಡು ರಸ್ತೆ ಅಭಿವೃದ್ಧಿ – 25 ಲಕ್ಷ, ಮೂಡಜೆಡ್ಡು ರಸ್ತೆ ಅಭಿವೃದ್ಧಿ – 20 ಲಕ್ಷ, ಬಚ್ಚಾರು ರಸ್ತೆ ಅಭಿವೃದ್ಧಿ – 20 ಲಕ್ಷ, ನಾಯರ್ಕೋಡು ಹೊಸಕ್ಲುಗೆ ಹೋಗುವ ರಸ್ತೆ ಅಭಿವೃದ್ಧಿ – 10 ಲಕ್ಷ ಸೇರಿದಂತೆ ಒಟ್ಟು 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುರೇಶ್ ಸೆರ್ವೇಗಾರ್, ಉಪಾಧ್ಯಕ್ಷರಾದ ದೇವು ಪೂಜಾರಿ, ಮಾಜಿ ಸದಸ್ಯರಾದ ಜಗದೀಶ್ ಹೆಗ್ಡೆ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಸುಭಾಸ್ ನಾಯ್ಕ್, ಪೆರ್ಡೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಜೀಯಾನಂದ ಹೆಗಡೆ, ಪೆರ್ಡೂರು ಶಕ್ತಿ ಕೇಂದ್ರದ ಸುಧಾಕರ್ ಶೆಟ್ಟಿ ಹಾಗೂ ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
