ತಾರಾಬರಿ ಸಂಪರ್ಕ ಸೇತುವೆಗೆ ₹1 ಕೋಟಿ ಅನುದಾನ: ಶಾಸಕ ರಾಜೇಶ್ ನಾಯ್ಕ್ ಶಿಲಾನ್ಯಾಸ

0
9

ಬಡಗಬೆಳ್ಳೂರು ಗ್ರಾಮದ ತಾರಾಬರಿ ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ₹1 ಕೋಟಿ ಅನುದಾನದಲ್ಲಿ ಶಿಲಾನ್ಯಾಸ ನೆರವೇರಿಸಿದರು.

ಸೇತುವೆ ಕಾಮಗಾರಿಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ. ಸೇತುವೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳು ಹಾಗೂ ಕೃಷಿಕರಿಗೆ ಸಂಚಾರದ ಅನುಕೂಲವಾಗಲಿದ್ದು, ಮಳೆಗಾಲದ ಸಮಸ್ಯೆಗಳಿಗೂ ಪರಿಹಾರ ದೊರೆಯುವ ನಿರೀಕ್ಷೆಯಿದೆ.