ಉತ್ತರ ಪ್ರದೇಶ: ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿದ ಪರಿಣಾಮ 11 ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಭಾನುವಾರ 15 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ.
ಪೊಲೀಸರ ಪ್ರಕಾರ, ಪ್ರಯಾಣಿಕರು ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಮೃತರ ವಿವರಗಳು ಮತ್ತು ಗುರುತುಗಳನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಘಟನೆಯನ್ನು ಗಮನಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲು ಮತ್ತು ಅವರಿಗೆ ಸರಿಯಾದ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.