ಆಟವಾಡ್ತಿದ್ದಾಗ ವಿದ್ಯುತ್‌ ಶಾಕ್‌ ಹೊಡೆದು 11 ವರ್ಷದ ಬಾಲಕಿ ಮೃತ್ಯು.!

0
373

ಆನೇಕಲ್‌: ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ನಾರಾಯಣಘಟ್ಟದಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಗೆ ವಿದ್ಯುತ್‌ ಶಾಕ್‌ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.

ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್‌ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್‌ ಶಾಕ್‌ ತಗುಲಿದೆ.

ವಿದ್ಯುತ್‌ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಇದರಿಂದ ಬೆಸ್ಕಾಂ ಅಧಿಕಾರಿಗಳ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೂರ್ಯನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here