ಗರ್ಭಿಣಿ ಮಹಿಳೆಯರಿಗೆ ₹11,000 ಪ್ರೋತ್ಸಾಹಧನ : ಮಾತೃವಂದನಾ ಯೋಜನೆಗೆ ಅರ್ಜಿ ಆಹ್ವಾನ

0
196

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ನಡೆಯಲಿದೆ.ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ.5 ಸಾವಿರ, ಎರಡನೇ ಮಗು(ಹೆಣ್ಣು ಮಗುವಾಗಿರುವುದಕ್ಕೆ) ರೂ.6 ಸಾವಿರ ನೀಡಲಾಗುತ್ತದೆ.

ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ತಾಲ್ಲೂಕಿನ ಫಲಾನುಭವಿಗಳು ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅವರು ತಿಳಿಸಿದ್ದಾರೆ.

ನೋಂದಣಿಗೆ ಬೇಕಾಗುವ ದಾಖಲಾತಿಗಳು – ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್(10 ವರ್ಷ ಕಳೆದಿರುವ ಆಧಾರ್ ಕಾರ್ಡ್ ಅಪ್ಟೇಟ್ ಆಗಿರಬೇಕು), ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರೂ ಒಂದರ ನಕಲು ಪ್ರತಿ) ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಸನ್ನಕುಮಾರ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here