ಜೂ.28ರಂದು ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರ

0
30

ಉಳ್ಳಾಲ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ದಿನಾಂಕ 28.06.2026ನೇ ಆದಿತ್ಯವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲ ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದಿAದ ದಂತ ತಪಾಸಣೆ ಮತ್ತು ಸಲಹೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು ಹಾಗೂ ಕಣಚೂರು ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಮಧುಮೇಹ ತಪಾಸಣೆ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇನ್ನಿತರ ವೈದ್ಯಕೀಯ ಸೇವೆಗಳು ಲಭ್ಯವಿದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.

ಈ ವೈದ್ಯಕೀಯ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಹಾಗೂ ಉಳ್ಳಾಲ ತಾಲೂಕು ಮಹಿಳಾ ಮಂಡಳಗಳ ಒಕ್ಕೂಟ (ರಿ.) ಉಳ್ಳಾಲ ಇವರುಗಳ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಗಿದೆ.

ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here