ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಸಹಕಾರ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯೂನಿಯನ್ (ಲಿ.), ಮಂಗಳೂರು ಇವರ ಆಶ್ರಯದಲ್ಲಿ, ಕೇಂದ್ರ ಸಹಕಾರ ಸಚಿವಾಲಯವು ಸ್ಥಾಪನೆಯಾಗಿ 5 ವರ್ಷಗಳನ್ನು ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ “ವಿಶೇಷ ಸಹಕಾರಸಪ್ತಾಹ”ದ ಪ್ರಯುಕ್ತ “ಸಾಮಾಜಿಕ ಕಳಕಳಿ – ಸಹಕಾರ ಆರೋಗ್ಯ” ಧ್ಯೇಯದೊಂದಿಗೆ 112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ದಿನಾಂಕ 05-07-2026ನೇ ಆದಿತ್ಯವಾರ ಪೂರ್ವಾಹ್ನ ಸಮಯ 9 ರಿಂದ ಮಧ್ಯಾಹ್ನ 12.30 ರವರೆಗೆ ಉಪ್ಪಿನಂಗಡಿಯ ಯೂನಿಯನ್ ಬ್ಯಾಂಕ್ ಹತ್ತಿರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
“ವಿಶೇಷ ಸಹಕಾರ ಸಪ್ತಾಹ”ದ ಪ್ರಯುಕ್ತ ದ್ವಜಾರೋಹಣವನ್ನು ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಅಶೋಕ್ ಕುಮಾರ್ ರೈ ಯವರು ನಡೆಸಿಕೊಡಲಿದ್ದಾರೆ. ಸಭಾಧ್ಯಕ್ಷತೆಯನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತು ಸದಸ್ಯರಾದ ಸನ್ಮಾನ್ಯ ಕಿಶೋರ್ ಕುಮಾರ್ ಪುತ್ತೂರು ರವರು ನೆರೆವೆರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ (ಲಿ.) ಮಂಗಳೂರು ಇದರ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರವರು ಹಾಗೂ ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂದಕರಾದ ಹೆಚ್.ಎನ್ ರಮೇಶ್ ರವರು ಭಾಗವಹಿಸಲಿದ್ದಾರೆ.

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಹಾಗೂ ಮೂರ್ತೆದಾರರ ಸೇವಾ ಸಹಕಾರಿ ಸಂಘ (ನಿ.) ಉಪ್ಪಿನಂಗಡಿ ಇದರ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ರವರ ಗೌರವ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮವು ಜರುಗಲಿದೆ.
ಈ ವೈದ್ಯಕೀಯ ಶಿಬಿರದಲ್ಲಿ ÷ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯರ ತಂಡದವರಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತç ಚಿಕಿತ್ಸೆ, ಮಧುಮೇಹ ತಪಾಸಣೆ , ಬಿ.ಪಿ ತಪಾಸಣೆ , ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸನೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆಯನ್ನು ಮಾಡಲಾಗುವುದು.
ಈ ಉಚಿತ ವೈದ್ಯಕೀಯ ಶಿಬಿರವನ್ನು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು , ರೋಟರಿ ಕ್ಲಬ್ ಉಪ್ಪಿನಂಗಡಿ, ಹಾಗೂ ಜೆಸಿಐ ಉಪ್ಪಿನಂಗಡಿ ಇವರುಗಳ ಒಟ್ಟು ಸಹಯೋಗದೊಂದಿಗೆ ಆಯೋಜಿಸಲಾಗಿದೆ.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಸೌಮ್ಯ ವಿಜಯರವರು ಪತ್ರಿಕಾ ಪ್ರಕಟಣೆಯಲ್ಲಿತಿಳಿಸಿರುತ್ತಾರೆ.

