ಪಾದೂರು : ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಪಾದೂರು ವತಿಯಿಂದ ಆಯೋಜಿಸಲಾಗಿರುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ.14ರಂದು ಪಾದೂರು ಬಬ್ಬುಸ್ವಾಮಿ ಕಾಂಪೌಂಡ್‌ನಲ್ಲಿರುವ ಸಾರ್ವಜನಿಕ ಗಣೇಶೋತ್ಸವ ವೇದಿಕೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ.
ಸೆ.14ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದ್ದು, ಬಳಿಕ ಗಣಹೋಮ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಮಧ್ಯಾಹ್ನ 3 ಗಂಟೆಗೆ ವಿಸರ್ಜನಾ ಪೂಜೆ ಹಾಗೂ ಮಹಾಪೂಜೆ ನೆರವೇರಿದ ಬಳಿಕ ಶ್ರೀ ಗಣೇಶ ಮೂರ್ತಿಯ ಭವ್ಯ ಶೋಭಾಯಾತ್ರೆ ನಡೆಯಲಿದ್ದು, ನಂತರ ವಿಸರ್ಜನಾ ಕಾರ್ಯಕ್ರಮ ನೆರವೇರಲಿದೆ.
ಗಣೇಶೋತ್ಸವದ ಅಂಗವಾಗಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ದೇವರ ಗಂಧ ಪ್ರಸಾದವನ್ನು ಸ್ವೀಕರಿಸಿ ಶ್ರೀ ಮಹಾಗಣಪತಿ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮನವಿ ಮಾಡಿದೆ.

