ರಾಜಸ್ಥಾನ: ಮಹಾಶಿವರಾತ್ರಿ ದಿನದಂದು ನಡೆದ ಅದ್ಧೂರಿ ಮೆರವಣಿಗೆಯಲ್ಲಿ ವಿದ್ಯುತ್ ಸ್ಪರ್ಶಿಸಿ 14 ಮಕ್ಕಳು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನ ಕೋಟಾದ ಕುನ್ಹಾಡಿ ಥರ್ಮಲ್ ಚೌರಾ ಬಳಿ ಈ ಘಟನೆ ನಡೆದಿದೆ.
ಗಂಭೀರ ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಆಗಮಿಸಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.
ಸದ್ಯಕ್ಕೆ ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಧಾವಿಸಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ 14 ಮಕ್ಕಳ ಪೋಷಕರ ರೋದನೆ ಮುಗಿಲು ಮುಟ್ಟಿದೆ. ಇನ್ನೂ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಪೋಷಕರಿಗೆ ಸಾಂತ್ವನ ಹೇಳಲು ಜನಪ್ರತಿನಿಧಿಗಳು, ರಾಜಕಾರಣಿಗಳು ಸಂಘ ಸಂಸ್ಥೆ ಮುಖಂಡರು ಅಧಿಕಾರಿಗಳು ಸ್ಥಳಕ್ಕೆ ಬಂದು ಹೋಗುತ್ತಿದ್ದಾರೆ.