ಉಡುಪಿ: ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ 14 ಮನೆಗಳ ಗೃಹಪೂಜೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಡಿ. 25 ರಂದು ಬೆಳಗ್ಗೆ 10.30ಕ್ಕೆ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿಯಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಮುಖ್ಯಸ್ಥ ಡಾ. ಎಚ್.ಎಸ್.ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೃಹಪೂಜೆ ಮತ್ತು ಆಶೀರ್ವಚನ ನೆರವೇರಿಸಲಿದ್ದಾರೆ. ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠದ ಶ್ರೀ ಡಾ.ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸಮಾರಂಭ ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ವಹಿಸಲಿದ್ದಾರೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಆತಿಥೇಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ ಭಾಗವಹಿಸಲಿದ್ದಾರೆ. ಪಹರೆ ವೇದಿಕೆ ಅಧ್ಯಕ್ಷ ನಾಗರಾಜ ನಾಯಕ್ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಳಿ ಕಡೆಕಾರ್, ಕರ್ನಾಟಕ ಮತ್ತು ಕೇರಳದ ಕೊರಗ ಸಂಘಗಳ ಒಕ್ಕೂಟ ಅಧ್ಯೆ ಸುಶೀಲಾ ನಾಡ, ಉಳ್ಳೂರು ಗ್ರಾ.ಪಂ. ಅಧ್ಯೆ ಕುಸುಮಾ ಶೆಟ್ಟಿ, ಉಳ್ಳೂರು ಶ್ರೀ ಬನಶಂಕರಿ ದೇವಾಲಯದ ಮೊಕ್ತೇಸರ ಸಂಜೀವ ಶೆಟ್ಟಿ ಸಂಪಿಗೇಡಿ ಉಪಸ್ಥಿತರಿರಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಉಳ್ಳೂರು ಗ್ರಾಪಂ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ, ಟ್ರಸ್ಟ್ ಉಪಾಧ್ಯಕ್ಷ ಹಾಲಾಡಿ ನಾಗರಾಜ ಶೆಟ್ಟಿ, ಸಂಚಾಲಕ ಪ್ರಮೋದ್ ಕುಮಾರ್, ಕೃಷ್ಣ ಪೂಜಾರಿ ಉಪಸ್ಥಿತರಿದ್ದರು.

