Thursday, May 1, 2025
HomeUncategorizedಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು: ಕ್ರಿಮಿನಲ್ ಕೇಸ್

ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್ ರದ್ದು: ಕ್ರಿಮಿನಲ್ ಕೇಸ್

ರಾಂಚಿ: ಯೋಗ ಗುರು ಬಾಬಾ ರಾಮ್ ದೇವ್ ನೇತೃತ್ವದ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ  ಪರವಾನಗಿ ರದ್ದುಗೊಂಡಿದೆ. ಉತ್ತರಾಖಂಡ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ,

ಅಲ್ಲದೆ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ಕ್ರಿಮಿನಲ್ ಪ್ರಕರಣವನ್ನೂ ದಾಖಲಿಸಲಾಗಿದೆ. ಡ್ರಗ್ಸ್ ಮತ್ತು ರೆಮಿಡೀಸ್ ಕಾಯ್ದೆಯ ಉಲ್ಲಂಘನೆಗಾಗಿ ಪ್ರಕರಣ ದಾಖಲಿಸಲಾಗಿದೆ. ಪತಂಜಲಿಯ ದಿವ್ಯಾ ಫಾರ್ಮಸಿಯ ದೃಷ್ಟಿ ಐ ಡ್ರಾಪ್, ಸ್ವಸರಿ ಗೋಲ್ಡ್, ಸ್ವಸರಿ ವತಿ, ಬ್ರಾಂಕೋಮ್, ಸ್ವಸರಿ ಪ್ರವಾಹಿ, ಸ್ವಸರಿ ಅವಲೇಹ್, ಮುಕ್ತಾವತಿ ಎಕ್ಸ್ ಟ್ರಾ ಪವರ್, ಲಿಪಿಡಮ್, ಬಿಪಿ ಗ್ರಿಟ್, ಮಧುಗ್ರಿಟ್, ಮಧುನಾಶಿನಿ ವಟಿ ಎಕ್ಸ್ ಟ್ರಾ ಪವರ್, ಲಿವಾಮೃತ್ ಅಡ್ವಾನ್ಸ್, ಲಿವೊಗ್ರಿಟ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ ಎಂದು ಪರವಾನಗಿ ಸಂಸ್ಥೆ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ ಅಫಿಡವಿಟ್ ನಲ್ಲಿ ಉಲ್ಲೇಖಿಸಿದೆ

RELATED ARTICLES
- Advertisment -
Google search engine

Most Popular