ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಬ್ಯಾಂಕ್ of Baroda ಮೂಡಬಿದರೆ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ, ಯುವವಾಹಿನಿ (ರಿ) ಮೂಡಬಿದಿರೆ ಘಟಕ ಹಾಗೂ ವಿಚೀಸ್ ಕೌಶಲ್ಯ ಕೇಂದ್ರ ಮೂಡಬಿದರೆ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ 17-04-26ರಂದು ಮೂಡಬಿದರೆ ಸಮಾಜ ಮಂದಿರದಲ್ಲಿ ನಡೆಯಿತು.
ಮಹಿಳೆಯರು ಆರಿ ಕೌಶಲ್ಯ ತರಬೇತಿ ಕಲಿತರೆ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು ಉತ್ತಮ ಬೇಡಿಕೆಯಿದೆ, ಮನೆಯಲ್ಲಿ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ ಎಂದರು.
ಬ್ಯಾಂಕ್ ಆಫ್ ಬರೋಡ ಮೂಡಬಿದರೆ ಶಾಖೆ ವ್ಯವಸ್ಥಾಪಕರಾದ ಪ್ರಭು ಇವರು ಸ್ವ ಉದ್ಯೋಗ ಮಾಡಲು ಬ್ಯಾಂಕಿಂಗ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಯುವವಾಹಿನಿ (ರಿ) ಮೂಡಬಿದರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ಇವರು ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರ ಸ್ವ ಉದ್ಯೋಗ ಮಾಡಲು ಯುವವಾಹಿನಿ ಸದಾ ನೆರವು ನೀಡಲಿದೆ ಎಂದರು.
ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ತರಬೇತಿಯ ನಂತರದ ಅವಕಾಶಗಳ ಬಗ್ಗೆ ವಿವರಿಸಿದರು. ಕೆನರಾ ಬ್ಯಾಂಕ್ ಅಮೂಲ್ಯ ಸಾಕ್ಷರತಾ ಯೋಜನೆಯ ಮುಖ್ಯ ಸಮಾಲೋಚಕರಾದ ಲತೇಶ್. B, ವೀಚೀಸ್ ಕೌಶಲ್ಯ ಕೇಂದ್ರದ ನಿರ್ದೇಶಕಿ ಶುಭಲಕ್ಷ್ಮಿ, ಸಂಪನ್ಮೂಲ ವ್ಯಕ್ತಿಗಳಾದ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. 30 ಮಹಿಳೆಯರು ತರಬೇತಿ ಯಶಸ್ವಿಯಾಗಿ ಪೂರೈಸಿ ಪ್ರಮಾಣಪತ್ರ ಪಡೆದರು. ಕವಿತ ಓಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

