ಪಾಕ್ ಗುಂಡಿನ ದಾಳಿಗೆ 15 ಭಾರತೀಯರು ಸಾವು, 43 ಮಂದಿಗೆ ಗಾಯ

0
607


ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದರು. ಇದಕ್ಕೆ ಪ್ರತಿಯಾಗಿ ಭಾರತವು ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ 9 ಕಡೆಗಳಲ್ಲಿ ದಾಳಿ ನಡೆಸಿತು. ಈ ಬೆನ್ನಲ್ಲೇ ಪಾಕ್ ಭಾರತೀಯರ ಮೇಲೆ ಗುಂಡಿನ ದಾಳಿ ನಡೆಸಿದೆ.
ಎಸ್, ಪಾಕ್ ಗುಂಡಿನ ದಾಳಿಗೆ 15 ಭಾರತೀಯರು ಸಾವನ್ನಪ್ಪಿದ್ದು, 43 ಮಂದಿಗೆ ಗಾಯವಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ತಂಗ್ಧರ್‌ನಲ್ಲಿ ಜರುಗಿದೆ.

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ನಡೆಸಿದೆ.‌ ಇದರಲ್ಲಿ ಸುಮಾರು 100ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ.

ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲೆ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿತ್ತು. ಮಂಗಳವಾರ ತಡರಾತ್ರಿ 1:45ರ ಸುಮಾರಿಗೆ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಹೆಸರಲ್ಲಿ ಪ್ರಮುಖ ಉಗ್ರರ ತಾಣಗಳನ್ನು ಗುರಿಯಾಗಿಸಿ ಏರ್‌ಸ್ಟ್ರೈಕ್ ನಡೆಸಿತು.

ಈ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿ 15 ನಾಗರಿಕರನ್ನು ಬಲಿ ತೆಗೆದುಕೊಂಡಿದೆ.

LEAVE A REPLY

Please enter your comment!
Please enter your name here