ಪೋಷಕರ ಬೈಗುಳದಿಂದ ಮನನೊಂದ 16 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು

0
110

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸು ಎಂದಿದ್ದಕ್ಕೆ 16 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕ ಪ್ರಥಮ ಪಿಯುಸಿ ಓದುತ್ತಿದ್ದ ಅರುಣಗೌಡ ಎಂದು ತಿಳಿದು ಬಂದಿದೆ. ಅರುಣಗೌಡ ಪೋಷಕರು ಮೊಬೈಲ್ ಬಿಟ್ಟು ಓದಿನ ಕಡೆ ಗಮನಹರಿಸಲು ಹೇಳಿದ್ದಾರೆ. ಹೆತ್ತವರು ಬುದ್ಧಿವಾದ ಹೇಳಿದ್ದಕ್ಕೆ ಆತ ಡಿಸೆಂಬರ್ 16ರಂದು ಕ್ರಿಮಿನಾಶಕ ಸೇವಿಸಿದ್ದ. ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅರುಣಗೌಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಈ ಕುರಿತು ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here