ಬಂಟ್ವಾಳ: ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬಿ.ಸಿ.ರೋಡು ಸಮೀಪದ ಗಾಣದಪಡ್ಪು ಸಭಾಂಗಣದಲ್ಲಿ ‘ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170ನೇ ಜನ್ಮದಿನಾಚರಣೆ’ ಕಾರ್ಯಕ್ರಮ ಇದೇ 25ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. 11 ಗಂಟೆಗೆ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ ಹರಿಕೃಷ್ಣ ಬಂಟ್ವಾಳ್ ಪ್ರಸ್ತಾವನೆ ಮತ್ತು ಶಿಕ್ಷಕಿ ಆರತಿ ದಾಸಪ್ಪ ಪೂಜಾರಿ ಉಪನ್ಯಾಸ ನೀಡುವರು.
ಇದೇ ವೇಳೆ ವಿವಿಧ ಕ್ಷೇತ್ರಗಳ ಸಾಧಕರಾದ ಪ್ರಜ್ವಲ್ ಕುಮಾರ್ (ಶೈಕ್ಷಣಿಕ), ಸಿದ್ಧಾರ್ಥ ಎಂ.ಸಿ., ರಕ್ಷಾ ಜಿ., ಶರಣ್ಯ ಎನ್. ಟಿ. (ಕ್ರೀಡೆ) ಇವರನ್ನು ಸನ್ಮಾನಿಸಲಾಗುವುದು. ಮಧ್ಯಾಹ್ನ ಗುರುವರ್ಯರಿಗೆ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಂಘದ ಸದಸ್ಯರು ಸಹಿತ ಮಹಿಳಾ ಘಟಕ ಮತ್ತು ಯುವವಾಹಿನಿ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ ಎಂದು ಸಂಘದ ಪ್ರಧಾನ ಕಾರ್ಯದಶರ್ಿ ರಮೇಶ ಎಂ.ತುಂಬೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.