Tuesday, June 18, 2024
Homeಧಾರ್ಮಿಕಪೆರ್ಲದ ಇಡಿಯಡ್ಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ 1801ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಪೆರ್ಲದ ಇಡಿಯಡ್ಕದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯ 1801ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ

ಪೆರ್ಲ: ಧ.ಗ್ರಾ.ಯೋಜನೆ ಮಂಜೇಶ್ವರ ತಾಲೂಕು ಸಮಿತಿ ನೇತೃತ್ವದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ, ಮಂಜುನಾಥೇಶ್ವರ ವ್ಯಸನಮುಕ್ತ ಮತ್ತು ಸಂಶೋಧನ ಕೇಂದ್ರ ಉಜಿರೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಇದರ ಮಾರ್ಗದರ್ಶನದೊಂದಿಗೆ ಪ್ರಗತಿ ಬಂಧು ಸ್ವಸಹಾಯ ಸಂಘ ಒಕ್ಕೂಟ ಪೆರ್ಲ ವಲಯ,ನವಜೀವನ ಸಮಿತಿ,ಸ್ಥಳೀಯರ ಸಹಕಾರದೊಂದಿಗೆ 1801ನೇ ಮದ್ಯವರ್ಜನ ಶಿಬಿರ ಇಡಿಯಡ್ಕದ ಶ್ರೀದುರ್ಗಾಪರಮೇಶ್ವರಿ ಕ್ಷೇತ್ರದ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಮಂಗಳವಾರ ಆರಂಭಗೊಂಡಿತು. ಇಡಿಯಡ್ಜ ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣರಾಜ ಪುಣಿಂಚಿತ್ತಾಯ ದೀಪ ಪ್ರಜ್ವಲನೆಗೈಯುವ ಮೂಲಕ ಉದ್ಘಾಟಿಸಿದರು. ಮಂಜೇಶ್ವರ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಸಭೆಯ ಅಧ್ಯಕ್ಷತೆವಹಿಸಿದ್ದರು.ಎಣ್ಮಕಜೆ ಗ್ರಾಮ ಪಂಚಾಯತು ಅಧ್ಯಕ್ಷ ಸೋಮಶೇಖರ್ ಜೆ.ಎಸ್, ಜನ ಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ವಲಯ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಕ್ಯಾಂಪ್ಕೋ ಉಪಾಧ್ಯಕ್ಷ ಶಂ.ನಾ.ಖಂಡಿಗೆ, ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್ ಆನೆಬಾಗಿಲು, ಎಣ್ಮಕಜೆ ಗ್ರಾ.ಪಂ.ಸದಸ್ಯೆ ಇಂದಿರಾ, ಪ್ರಗತಿಬಂಧು ಪೆರ್ಲ ವಲಯಾಧ್ಯಕ್ಷ ಶ್ರೀಧರ ಮಣಿಯಾಣಿ, ಜನ ಜಾಗೃತಿ ಪೆರ್ಲ ವಲಯಾಧ್ಯಕ್ಷ ಬಿ.ಪಿ.ಶೇಣಿ, ಭಜನಾ ಪರಿಷತ್ ವಲಯಾಧ್ಯಕ್ಷ ಶ್ರೀಧರ ನಾಯಕ್ ,ಶೌರ್ಯ ವಿಪತ್ತು ನಿರ್ವಹಣಾ ಘಟಕಗಳ ಮಾಸ್ಟರ್ ಸುರೇಂದ್ರ ಬಿ,ಡಾ.ಸ್ವಪ್ನಾ ಜೆ.ಉಕ್ಕಿನಡ್ಕ, 1801ನೇ ಮದ್ಯವರ್ಜನ ಸಮಿತಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸದಾನಂದ ಶೆಟ್ಟಿ ಕುದ್ವ,ಶಿಬಿರಾಧಿಕಾರಿ ದೇವಿಪ್ರಸಾದ್ ಸುವರ್ಣ ಸಭೆಯಲ್ಲಿ ಉಪಸ್ಥಿತರಿದ್ದು ಮಾತನಾಡಿದರು.ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವನೆಗೈದರು. ಧ.ಗ್ರಾ.ಯೋಜನೆಯ ಪೆರ್ಲ ವಲಯ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ ಮೇಲ್ವಿಚಾರಕ ರಮೇಶ್ ವಂದಿಸಿದರು. ಭಾಸ್ಕರ್ ನಿರೂಪಿಸಿದರು.

RELATED ARTICLES
- Advertisment -
Google search engine

Most Popular