
ಮೂಡುಬಿದಿರೆ: ಕಡಂದಲೆ ಗ್ರಾಮದ ಪೂಪಾಡಿಕಲ್ಲು ಅರಣ್ಯ ಇಲಾಖೆಗೆ ಸೇರಿದ ಸುಮಾರು ಎರಡು ಎಕರೆ ಜಾಗ ಅಗ್ನಿಗೆ ಆಹುತಿಯಾಗಿರುವ ಘಟನೆ ಸಂಭವಿಸಿದೆ.

ಈ ಬಗ್ಗೆ ಸ್ಥಳೀಯ ಪತ್ರಕರ್ತ ರಾದ ಜಗದೀಶ್ ಪೂಜಾರಿ ಅವರು ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಬಳಿಕ ಅಗ್ನಿ ಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಈ ವೇಳೆ ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಪುನಃ ರಾತ್ರಿ ಸುಮಾರು 9ಗಂಟೆಗೆ ಒತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು. ಊರಿನವರು ಸೇರಿ ಬೆಂಕಿಯನ್ನು ನಂದಿಸಿದರು. ಘಟನ ಸ್ಥಳದಲ್ಲಿ ದ. ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ. ಪಿ ಸುಚರಿತ ಶೆಟ್ಟಿ ಉಪಸ್ಥಿತರಿದ್ದರು.