ಪಣಿಯೂರಿನಲ್ಲಿ ಸೆ.14ರಂದು 23ನೇ ವರ್ಷದ ಶ್ರೀ ಗಣೇಶೋತ್ಸವ

0
16

ಪಣಿಯೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 23ನೇ ವರ್ಷದ ಶ್ರೀ ಗಣೇಶೋತ್ಸವವನ್ನು ಸೆಪ್ಟೆಂಬರ್ 14ರಂದು ಪಣಿಯೂರಿನಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಗಣೇಶ ಮಂಟಪ ಪಣಿಯೂರು ಎಂಬಲ್ಲಿ ಸಂಭ್ರಮದಿಂದ ಆಚರಿಸಲಾಗುವುದು.

ಉತ್ಸವದ ಅಂಗವಾಗಿ ಬೆಳಿಗ್ಗೆ 8:30ಕ್ಕೆ ಶ್ರೀ ಗಣೇಶೋತ್ಸವ ಸಮಿತಿಯ ಕಟ್ಟಡ **‘ಬೆನಕ’**ದಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು, ಬಳಿಕ ಶ್ರೀ ಗಣೇಶ ಮಂಟಪಕ್ಕೆ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ ಹಾಗೂ ಗಣಹೋಮ ನೆರವೇರಲಿದೆ. ಬೆಳಿಗ್ಗೆ 10:30ರಿಂದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿವೆ.

ಮಧ್ಯಾಹ್ನ 12:30ರಿಂದ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2:30ರಿಂದ ಶ್ರೀ ವಿನಾಯಕ ಯಕ್ಷ ಕಲಾ ತಂಡ, ಕೆರೆಕಾಡು ಇವರಿಂದ ‘ಶ್ರೀ ದೇವಿ ಬನಶಂಕರಿ’ ಯಕ್ಷಗಾನ ಪ್ರದರ್ಶನ ನಡೆಯಲಿದ್ದು, ಭಾಗವತಿಕೆಯಲ್ಲಿ ಡಾ. ಪ್ರಖ್ಯಾತ್ ಶೆಟ್ಟಿ ಭಾಗವಹಿಸಲಿದ್ದಾರೆ.

ಸಂಜೆ 6:30ರಿಂದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ಸಂಜೆ 7 ಗಂಟೆಯಿಂದ ರಂಗಪೂಜೆ, ಮಹಾಪೂಜೆ ಹಾಗೂ ಪ್ರಸಾದ ವಿತರಣೆ ನೆರವೇರಲಿದೆ.

ರಾತ್ರಿ 7:30ಕ್ಕೆ ಶ್ರೀ ಗಣೇಶ ದೇವರ ವೈಭವೋತ್ಸವದ ಮೆರವಣಿಗೆ ನಡೆಯಲಿದ್ದು, ಬಳಿಕ ಕುಂಜೂರು ಶ್ರೀ ದುರ್ಗಾ ದೇವಳದ ಸರೋವರದಲ್ಲಿ ಜಲಸ್ತಂಭನ ಕಾರ್ಯಕ್ರಮ ನೆರವೇರಲಿದೆ. ರಾತ್ರಿ 9:30ಕ್ಕೆ ಕುಂಜೂರು ಶ್ರೀ ದುರ್ಗಾ ದೇವರಿಗೆ ಹೂವಿನ ಪೂಜೆ ಹಾಗೂ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಉತ್ಸವದ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಗಣೇಶ ದೇವರ ಕೃಪೆಗೆ ಪಾತ್ರರಾಗುವಂತೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪಣಿಯೂರು ವತಿಯಿಂದ ಹೃತ್ಪೂರ್ವಕವಾಗಿ ಆಮಂತ್ರಿಸಲಾಗಿದೆ.

ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಪಣಿಯೂರು, ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸುವಂತೆ ಮನವಿ ಮಾಡಿದ್ದಾರೆ.