ವಿವಿಧ ಧಾರ್ಮಿಕ ಹಾಗೂ ಕ್ರೀಡಾ ಕಾರ್ಯಕ್ರಮ
ಬೆಳ್ತಂಗಡಿ: ಬದ್ಯಾರು ಶಿರ್ಲಾಲಿನ ಶ್ರೀ ಲೋಕನಾಥೇಶ್ವರ ದೇವಸ್ಥಾನ, ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬದ್ಯಾರು ಶಿರ್ಲಾಲು ಇವರ ಜಂಟಿ ಆಶ್ರಯದಲ್ಲಿ 24ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದೆ.
ಗಣೇಶೋತ್ಸವದ ಅಂಗವಾಗಿ ಕ್ಷೇತ್ರದಲ್ಲಿ ವಿವಿಧ ರೀತಿಯ ಪೂಜೆ, ಪುರಸ್ಕಾರ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಇದರೊಂದಿಗೆ ಸಾರ್ವಜನಿಕರಿಗಾಗಿ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿದೆ. ಗ್ರಾಮೀಣ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳ ಜೊತೆಗೆ ತಾಲೂಕು ಮಟ್ಟದ ಕಬಡ್ಡಿ ಹಾಗೂ ವಾಲಿಬಾಲ್ ಪಂದ್ಯಾಟಗಳು ನಡೆಯಲಿವೆ.
ಕಾರ್ಯಕ್ರಮದಲ್ಲಿ ಧಾರ್ಮಿಕ ಸಭೆಯೂ ನಡೆಯಲಿದ್ದು, ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಗಣೇಶೋತ್ಸವದ ಅಂಗವಾಗಿ ಭಕ್ತರಿಗೆ ದೇವರ ತೀರ್ಥ-ಪ್ರಸಾದ ಹಾಗೂ ಅನ್ನಸಂತರ್ಪಣೆಯ ವ್ಯವಸ್ಥೆ ಇರಲಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ಶ್ರೀ ಲೋಕನಾಥೇಶ್ವರ ಆಡಳಿತ ಸಮಿತಿ, ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ ಪ್ರಕಟಣೆ ತಿಳಿಸಿದೆ.

