26ನೇ ವರ್ಷದ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

0
30

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ 26ನೇ ವರ್ಷದ ವಾರ್ಷಿಕ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆಯು ಆದಿತ್ಯವಾರ ಸಂಘದ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷರಾದ ಸುರೇಶ್ ಪೂಜಾರಿ ಅಬ್ಬನಡ್ಕ ಅವರ ಅಧ್ಯಕ್ಷತೆಯಲ್ಲಿ ವಾರ್ಷಿಕ ಮಹಾಸಭೆ ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಧ್ಯಕ್ಷರಾದ ದಿನೇಶ್ ಪೂಜಾರಿ ಬೀರೋಟ್ಟು, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ, ಸಂಫದ ಪೂರ್ವ ಅಧ್ಯಕ್ಷರಾದ ರಘುವೀರ್ ಶೆಟ್ಟಿ, ಆನಂದ ಪೂಜಾರಿ, ರಾಜೇಶ್ ಕೋಟ್ಯಾನ್, ಮಹಿಳಾ ಸಂಘಟನಾ ಕಾರ್ಯದರ್ಶಿ , ಸುಲೋಚನ ಕೋಟ್ಯಾನ್, ನೂತನ ಉಪಾಧ್ಯಕ್ಷ ಹರಿಣಿ ಪೂಜಾರಿ, ನೂತನ ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ನೂತನ ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ ಸ್ವಾಗತಿಸಿದರು. ಕಾರ್ಯದರ್ಶಿ ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ಸುಭಾಷ್ ಕುಮಾರ್ ಧನ್ಯವಾದ ಸಲ್ಲಿಸಿದರು.