ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

0
10

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ  ಶುಕ್ರವಾರದಂದು,  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು  ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದ್ದು,  ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು  ತರಬೇತುದಾರರು   ಅಭ್ಯಾಸ ಮಾಡಿಸಿದರು.

ಈ ಸಂದರ್ಭದಲ್ಲಿ  ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.