ಬಿ.ಸಿ.ರೋಡ್ : ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಂಟ್ವಾಳ ತೌಹೀದ್ ಶಾಲಾ 2ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶಹಿಮಾ ಅವರು ಮೂರು ವಾರಗಳ ಹಿಂದೆ ಮನೆಯಲ್ಲಿ ಕುಸಿದುಬಿದ್ದಿದ್ದರು. ತಕ್ಷಣ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಮೂರು ದಿನ ಕೋಮದಲ್ಲಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.