Tuesday, March 18, 2025
Homeರಾಜ್ಯದ್ವಿತೀಯ ಪಿಯು ಫಲಿತಾಂಶ ಪ್ರಕಟ ಶೇ 81.15 ಮಂದಿ ಉತ್ತೀರ್ಣ ದ.ಕ. ಜಿಲ್ಲೆಗೆ ಮೊದಲ ಸ್ಥಾನ

ದ್ವಿತೀಯ ಪಿಯು ಫಲಿತಾಂಶ ಪ್ರಕಟ ಶೇ 81.15 ಮಂದಿ ಉತ್ತೀರ್ಣ ದ.ಕ. ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. 11 ಗಂಟೆಗೆ ಅಧಿಕೃತ ವೆಬ್​​ಸೈಟ್​ನಲ್ಲಿ ಫಲಿತಾಂಶ ಪ್ರಕಟವಾಗುತ್ತಿದ್ದು, ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದಕ್ಷಿಣ ಕನ್ನಡ ಟಾಪ್, ಗದಗ ಜಿಲ್ಲೆಗೆ ಕೊನೆಯ ಸ್ಥಾನ

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

RELATED ARTICLES
- Advertisment -
Google search engine

Most Popular