ನವದೆಹಲಿ: ರಜೌರಿಯ ಬರ್ಗರ್ ಕಿಂಗ್ ರೆಸ್ಟೋರೆಂಟ್‌ನಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮೂವರು ದರೋಡೆಕೋರರು ಎನ್‌ಕೌಂಟರ್‌ಗೆ ಬಲಿಯಾಗಿದ್ದಾರೆ. ದೆಹಲಿ ಹಾಗೂ ಹರ್ಯಾಣ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ ಆಶಿಕ್ ಕಾಲು, ವಿಕ್ಕಿ ರಿಧಾನ್ ಮತ್ತು ಸನ್ನಿ ಗುಜ್ಜರ್ ಎಂಬವರು ಎನ್‌ಕೌಂಟರ್‌ನಲ್ಲಿ ಬಲಿಯಾಗಿದ್ದಾರೆ.
ಎನ್‌ಕೌಂಟರ್ ನಡೆದ ಸ್ಥಳದಿಂದ ಐದು ಪಿಸ್ತೂಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆಕೋರರ ತಂಡ ಉದ್ಯಮಿಗಳಿಂದ ಲಕ್ಷಾಂತರ ರೂ. ಹಣ ಸುಲಿಗೆ ಮಾಡುತ್ತಿತ್ತು.
ಜೂ. 18ರಂದು ಬರ್ಗರ್ ಕಿಂಗ್ ರೆಸ್ಟೋರೆಂಟ್‌ನಲ್ಲಿ ಅಮನ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಆತನೊಂದಿಗೆ ಕುಳಿತಿದ್ದ ಮಹಿಳೆ ಮಹಿಳೆ ತನ್ನ ಫೋನ್‌ನಲ್ಲಿ ವ್ಯಕ್ತಿಯೊಬ್ಬನಿಗೆ ಚಿತ್ರವನ್ನು ತೋರಿಸಿದ್ದಳು. ಬಳಿಕ ಆತನ ಮೇಲೆ ಮೊದಲು ಗುಂಡು ಹಾರಿಸಲಾಗಿತ್ತು. ನಂತರ ಕುಳಿತಿದ್ದ ಇಬ್ಬರು ಅಮನ್ ಮೇಲೆ ದಾಳಿ ಮಾಡಿದ್ದರು. ಅಮನ್ ಬಿಲ್ಲಿಂಗ್ ಕೌಂಟರ್ ಕಡೆಗೆ ಓಡಿ ಹೋದಾಗ ಆತನನ್ನು ಹಿಂಬಾಲಿಸಿ ಪಾಯಿಂಟ್ ಬ್ಲಾಂಕ್ ರೇಂಜ್‌ನಿಂದ ಅನೇಕ ಬಾರಿ ಗುಂಡು ಹಾರಿಸಲಾಗಿತ್ತು. ಹನಿಟ್ರಾಪ್ ಮಾಡಿ ಅಮನ್‌ನನ್ನು ಅಲ್ಲಿಗೆ ಕರೆಸಿಕೊಳ್ಳಲಾಗಿತ್ತು ಎಂದು ತಿಳಿದುಬಂದಿತ್ತು.