ಮುಂಬೈ: ಮಹಾರಾಷ್ಟ್ರದ ಮುಂಬೈನ ಥಾಣೆಯ ಮುಂಬ್ರಾದ ಜನನಿಭಿಡ ರಸ್ತೆಯೊಂದರಲ್ಲಿ ಹೆತ್ತವರ ಜೊತೆ ನಡೆದುಕೊಂಡು ಹೋಗುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಐದನೇ ಮಹಡಿಯಿಂದ ನಾಯಿಯೊಂದು ಬಿದ್ದು, ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ನಿನ್ನೆ ಮಧ್ಯಾಹ್ನ ಅಮೃತ್ ನಗರದಲ್ಲಿ ಈ ಘಟನೆ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಗೋಲ್ಡನ್ ರಿಟ್ರೈವರ್ ತಳಿಯ ನಾಯಿ ತಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ಮಗುವಿನ ಮೇಲೆ ಬಿದ್ದಿದೆ. ನಾಯಿ ಬಳಿಕ ಕುಂಟುತ್ತಾ ಸಾಗಿದೆ. ಆದರೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ನಾಯಿ ಬಿದ್ದ ತಕ್ಷಣ ಮಗು ಪ್ರಜ್ಞೆ ತಪ್ಪಿದೆ. ಸುತ್ತಮುತ್ತಲಿದ್ದವರು ತಾಯಿಗೆ ಸಹಾಯ ಮಾಡಿ ತಕ್ಷಣವೇ ಮಗುವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಮಗು ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದರು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದೆ.