ತರೀಕೆರೆಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 32ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರ

0
7

ತರೀಕೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಮಗಳೂರು, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ,ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ತರೀಕೆರೆ, APD ಬೆಂಗಳೂರು ಮತ್ತು ಸೇವಾಭಾರತಿ – ಸೇವಾಧಾಮ, ಚಿಕ್ಕಮಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ 32ನೇ ವಸತಿಯುತ ಉಚಿತ ಆರೋಗ್ಯ ತಪಾಸಣಾ, ಮಾಹಿತಿ ಹಾಗೂ ಜಾಗೃತಿ ಶಿಬಿರದ ಉದ್ಘಾಟನಾ ಸಮಾರಂಭವು ಅಕ್ಟೋಬರ್ 28 ರಂದು ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ತರೀಕೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ಚಂದ್ರಶೇಖರ್ ಬಿ.ಜಿ. ಅವರು ಉದ್ಘಾಟಿಸಿ, ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿದರು. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಸಮಾಜದಲ್ಲಿ ಹಿಂದುಳಿಯದೆ, ಪ್ರತಿಯೊಂದು ಕ್ಷೇತ್ರದಲ್ಲಿಯೂ ಮುಂದೆ ಬರಬೇಕು ಎಂಬ ಉದ್ದೇಶದಿಂದ ಇಂತಹ ಶಿಬಿರಗಳನ್ನು ಆಯೋಜಿಸುವಾಗ ನಮ್ಮಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಹಾಗೆಯೇ, ಸೇವಾಭಾರತಿ ಸಂಸ್ಥೆಯು ಇನ್ನೂ ಹೆಚ್ಚಿನ ಸೇವಾಕಾರ್ಯಗಳನ್ನು ಕೈಗೊಳ್ಳುವ ಮೂಲಕ ಯಶಸ್ಸನ್ನು ಸಾಧಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ತರೀಕೆರೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳಾದ ಡಾ. ಚನ್ನಬಸಪ್ಪ ಎಂ. ಜೆ, ತರೀಕೆರೆ ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ರೋ। ರವಿ ಕುಮಾರ್ ಬಿ. ಪಿ, ತರೀಕೆರೆ ವಿಕಸನ ಸಂಸ್ಥೆ ನಿರ್ದೇಶಕರಾದ ಎ. ಎಂ ವರ್ಗೀಸ್ ಕ್ಲೀಟಸ್, ತರೀಕೆರೆ ರೋಟರಿ ಕ್ಲಬ್ ಕಾರ್ಯದರ್ಶಿ ರೋ। ಪ್ರವೀಣ್ ಪಿ, ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ದೇವಾನಂದ್, ತರೀಕೆರೆ MRW ಅಕ್ರಮ್ ಪಾಷಾ, ಬೆಂಗಳೂರು APD ಯೋಜನಾ ಸಂಯೋಜಕರಾದ ಕುಸುಮಾಧರರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಚಿಕ್ಕಮಗಳೂರಿನ ಕ್ಷೇತ್ರ ಸಂಯೋಜಕರಾದ ನಾಗಾರ್ಜುನ ಡಿ ಎ ಸ್ವಾಗತಿಸಿ, ತರೀಕೆರೆ VRW ಶೈಲಾ ಬಿ ಕಾರ್ಯಕ್ರಮವನ್ನು ನಿರೂಪಿಸಿ, ದಕ್ಷಿಣ ಕನ್ನಡದ ಕ್ಷೇತ್ರ ಸಂಯೋಜಕರಾದ ಧನೇಂದ್ರ ಧನ್ಯವಾದವಿತ್ತರು.

ಒಟ್ಟು 10 ಮಂದಿ ದಿವ್ಯಾಂಗರು ಶಿಬಿರದಲ್ಲಿ ಪಾಲ್ಗೊಂಡಿದ್ದರು.