ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

0
4

ನೆರಿಯ : ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ(ನಿ.), ಶ್ರೀ ದುರ್ಗಾ ಮಾತೃ ಮಂಡಳಿ, ಕನ್ಯಾಡಿ ಇದರ ಸಹಕಾರದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ 36ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಏಪ್ರಿಲ್ 16 ರಂದು ನೆರಿಯದ ಬಯಲು ಬಸದಿಯ ಹತ್ತಿರ ಶ್ರೀಮತಿ ಶಿಲ್ಲಿಯವರ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಮುಂಡಾಜೆ ಪ್ರಾ.ಕೃ.ಪ.ಸ.ಸಂಘ(ನಿ.), ಅಧ್ಯಕ್ಷರಾದ ಪ್ರಕಾಶ್ ನಾರಾಯಣ ರವರು ಮಾತನಾಡಿ ಕಲಿತಂತ ವಿದ್ಯೆಯನ್ನು ಅರ್ಧಕ್ಕೆ ಕೈ ಬಿಡದೆ ಮುಂದುವರಿಸಿಕೊಂಡು ಹೋಗಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಕನ್ಯಾಡಿ ಸೇವಾಭಾರತಿಯ ಖಜಾಂಚಿ ಎ ಜೈರಾಜ್ ಸಾಲ್ಯಾನ್, ಟ್ರಸ್ಟಿ ಸ್ವರ್ಣಗೌರಿ, ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಬಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 23 ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಸಜಿತಾ ಎಲ್ಲರಿಗೂ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು. ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದವರು ಸಜಿತಾ ರವರಿಗೆ ಗೌರವಧನವನ್ನು ನೀಡಿ ಸಹಕರಿಸಿದ್ದಾರೆ. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ಗಿರಿಜಾ ಸ್ವಾಗತಿಸಿ, ಸೇವಾಭಾರತಿ ಡಾಕ್ಯುಮೆಂಟೇಶನ್ ಮೋಾನಿಟರಿಂಗ್ ಮತ್ತು ಇವ್ಯಾಲ್ಯೂಯೇಷನ್ ಕೋಆರ್ಡಿನೇಟರ್ ಕು. ಸುಮ ಕಾರ್ಯಕ್ರಮ ನಿರೂಪಿಸಿ, ರಜನಿ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here