ಶಿಗೆಲ್ಲ ಸೋಂಕಿಗೆ 4 ವರ್ಷದ ಮಗು ಬಲಿ..!

0
8

ತಿರುವನಂತಪುರಂ : ಕೇರಳದಲ್ಲಿ ಶಿಗೆಲ್ಲೋಸಿಸ್ (Shigellosis) ಸೋಂಕಿನ ಆತಂಕ ಹೆಚ್ಚಾಗಿದ್ದು, 4 ವರ್ಷದ ಮಗುವೊಂದು ಸೋಂಕಿಗೆ ಬಲಿಯಾಗಿರುವ ಘಟನೆ ಜನರಲ್ಲಿ ಕಳವಳ ಮೂಡಿಸಿದೆ. ಹಲವು ಜಿಲ್ಲೆಗಳಲ್ಲಿ ಮಕ್ಕಳಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳುತ್ತಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.

ಶಿಗೆಲ್ಲ (Shigella) ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಈ ಸೋಂಕು ತೀವ್ರ ಅತಿಸಾರ, ಹೊಟ್ಟೆನೋವು ಹಾಗೂ ಕರುಳುಬೇನೆಗೆ ಕಾರಣವಾಗುತ್ತದೆ. ಮುಖ್ಯವಾಗಿ ಕಲುಷಿತ ನೀರು ಮತ್ತು ಆಹಾರದ ಮೂಲಕ ಈ ಸೋಂಕು ಹರಡುತ್ತದೆ. ಸೋಂಕು ದೇಹ ಪ್ರವೇಶಿಸಿದ ಬಳಿಕ ಜೀರ್ಣಾಂಗ ವ್ಯವಸ್ಥೆಯ ಮೇಲೆ ದಾಳಿ ನಡೆಸಿ, ಹೊಟ್ಟೆಯಲ್ಲಿ ವಿಷಕಾರಿ ಅಂಶಗಳನ್ನು ಉತ್ಪಾದಿಸುತ್ತದೆ.

ಆರೋಗ್ಯ ತಜ್ಞರ ಪ್ರಕಾರ, ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಅತ್ಯಗತ್ಯ. ಮಳೆಗಾಲದಲ್ಲಿ ಸೋಂಕು ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕಾಗಿದೆ.

LEAVE A REPLY

Please enter your comment!
Please enter your name here