ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಮುನಿಯಾಲಿನಲ್ಲಿ 40ನೇ ವರ್ಷದ ಮೃತ್ತಿಕಾ ಗಣಪತಿ

0
23

ಮುನಿಯಾಲು: ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಮುನಿಯಾಲಿನಲ್ಲಿ 40ನೇ ವರ್ಷದ ಮೃತ್ತಿಕಾ ಗಣಪತಿ ಆರಾಧನೆಯು ಭಕ್ತಿಭಾವ ಹಾಗೂ ಸಾಂಪ್ರದಾಯಿಕ ವಿಧಿ-ವಿಧಾನಗಳೊಂದಿಗೆ ನೆರವೇರಿತು.

ಮೃತ್ತಿಕೆಯಿಂದ ನಿರ್ಮಿಸಲಾದ ಶ್ರೀ ಗಣಪತಿಯ ವಿಗ್ರಹವನ್ನು ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿ, ಗಣಹೋಮ, ವಿಶೇಷ ಪೂಜೆ, ಪುಷ್ಪಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗಣಪತಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.