ವಿಟ್ಲ : ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೀರಕಂಬ ನಿವಾಸಿ ಹರೀಶ್ ಎಸ್.ಟಿ. (48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದುಬಂದಿದೆ.
ಹರೀಶ್ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆ ತಿಳಿದುಬಂದ ಕೂಡಲೇ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಕಲೆಹಾಕುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಬೇಕಿದೆ.

