ಮೂಡುಬಿದಿರೆ : ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಮೂಡುಬಿದಿರೆ ವತಿಯಿಂದ ನಡೆಯಲಿರುವ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಟೀಮ್ ಬೆದ್ರದ ಪಿಲಿ ಸಾರಥ್ಯದಲ್ಲಿ 4ನೇ ವರ್ಷದ ‘ಪಿಲಿ ಏಸ’ ಕಾರ್ಯಕ್ರಮವನ್ನು ಸೆಪ್ಟೆಂಬರ್ 4 ಮತ್ತು 5ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆ.
ಸೆಪ್ಟೆಂಬರ್ 4ರಂದು ಬೆಳಗ್ಗೆ 8 ಗಂಟೆಗೆ ಶ್ರೀಕೃಷ್ಣ ದೇವರ ಮಹಾಮಂಗಳಾರತಿ, 8.30ಕ್ಕೆ ಅನ್ನಸಂತರ್ಪಣೆ ಹಾಗೂ 9 ಗಂಟೆಗೆ ಮೂಡುಬಿದಿರೆಯ ಕಾಮಧೇನು ಸಭಾಭವನದಲ್ಲಿ ಊದು ಪೂಜೆ ನಡೆಯಲಿದೆ.
ಸೆಪ್ಟೆಂಬರ್ 5ರಂದು ಬೆಳಗ್ಗೆ 9.30ಕ್ಕೆ ಹುಲಿವೇಷದ ಮೆರವಣಿಗೆ ನಡೆಯಲಿದ್ದು, ಸಂಜೆ 4 ಗಂಟೆಗೆ ಕುಣಿತದೊಂದಿಗೆ ವೈಭವದ ಶೋಭಾಯಾತ್ರೆ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕಲಾವಿದರು ಹಾಗೂ ಮಕ್ಕಳ ವಿಶೇಷ ಪ್ರದರ್ಶನಗಳು ಉತ್ಸವದ ಮೆರುಗು ಹೆಚ್ಚಿಸಲಿವೆ.
ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

