ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜೋಡುಕಟ್ಟೆ-ಬೋರ್ಕಟ್ಟೆ-ರೆಂಜಾಳ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರಕಾರದಿಂದ ರೂ. 05.00 ಕೋಟಿ ಅನುದಾನ ಮಂಜೂರಾಗಿರುತ್ತದೆ ಎಂದು ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ಅವರು ತಿಳಿಸಿರುತ್ತಾರೆ.
ಕಾರ್ಕಳದ ಜೋಡುಕಟ್ಟೆಯಿಂದ ಬೋರ್ಕಟ್ಟೆ-ರೆಂಜಾಳ-ಇರ್ವತ್ತೂರು-ಸಾಣೂರು ಸಂಪರ್ಕಿಸುವ ಮುಖ್ಯ ರಸ್ತೆ ಇದಾಗಿದ್ದು ಈ ರಸ್ತೆಯಲ್ಲಿ ದಿನಂಪ್ರತಿ ಸಾವಿರಾರು ವಾಹನಗಳು ಸಂಚರಿಸುತ್ತಿವೆ ಜೊತೆಗೆ ಈ ರಸ್ತೆಯಲ್ಲಿ ಅತ್ಯಂತ ತಿರುವುಗಳಿದ್ದು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ ವಿ ಸುನಿಲ್ ಕುಮಾರ್ ರವರು ರಸ್ತೆ ಅಭಿವೃದ್ಧಿ ಪಡಿಸುವಂತೆ ಪ್ರಸ್ತಾವನೆ ಸಲ್ಲಿಸಿ ನಿರಂತರ ಪ್ರಯತ್ನದ ಕಾರಣ ಇದೀಗ ಸದ್ರಿ ರಸ್ತೆ ಅಭಿವೃದ್ಧಿಗೆ ರೂ.05.00 ಕೋಟಿ ಅನುದಾನ ಬಿಡುಗಡೆಗೊಂಡಿರುತ್ತೆ.
ಮಾನ್ಯ ಶಾಸಕರ ವಿಶೇಷ ಮುತುವರ್ಜಿ ಹಾಗೂ ನಿರಂತರ ಪ್ರಯತ್ನದಿಂದಾಗಿ ಸರಕಾರದಿಂದ ಅನುದಾನ ಮಂಜೂರಾಗಿದ್ದು, ಆದಷ್ಟೂ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿಲಾಗುವುದು ಎಂದು ಕಾರ್ಕಳ ಶಾಸಕರ ʻವಿಕಾಸʼ ಜನಸೇವಾ ಕಛೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.