Saturday, January 18, 2025
HomeUncategorizedನದಿಯಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವು

ನದಿಯಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ನದಿಯಲ್ಲಿ ಈಜಲು ಇಳಿದ ಮೂವರು ಯುವತಿಯರು, ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕಾವೇರಿ ನದಿ ಹರಿಯುವ ಕನಕಪುರ ತಾಲೂಕಿನ ಮೇಕೆದಾಟುವಿನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಇವರು ಈಜುವಾಗ ನೀರಿನಲ್ಲಿ ಮುಳುಗಿದ್ದಾರೆ.

ಪೀಣ್ಯ ಎರಡನೇ ಹಂತದ ಹರ್ಷಿತ, ಅಭಿಷೇಕ್, ತೇಜಸ್, ವರ್ಷಾ ಹಾಗೂ ಸ್ನೇಹ ಮೃತರು. ಮೇಕೆದಾಟು ಬಳಿ ಕಾವೇರಿ ನದಿಯಲ್ಲಿ ಈಜುವಾಗ ಆಳವಾದ ನೀರಿನ ಸೆಳೆತಕ್ಕೆ ಸಿಲುಕಿ ಇವರು ಮುಳುಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಐವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ. ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

RELATED ARTICLES
- Advertisment -
Google search engine

Most Popular