ಮಂಗಳೂರು : ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಏ. 27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಮೌಲ್ಯದ 825 ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮೂರು ಅಂಡಾಕಾರದ ವಸ್ತುಗಳಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ. ಹೊರತೆಗೆದು ಪ್ರಕ್ರಿಯೆಗಳನ್ನು ನಡೆಸಿದ ಬಳಿಕ ನಿವ್ವಳ 750 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧತೆಯ ಚಿನ್ನ ಇರುವುದು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.