ದೆಹಲಿಯಲ್ಲಿ ನಡೆಯುತ್ತಿರುವ ದೆಹಲಿ ಪ್ರೀಮಿಯರ್ ಲೀಗ್‌ನಲ್ಲಿ ದಕ್ಷಿಣ ದೆಹಲಿ ಸೂಪರ್‌ಸ್ಟಾರ್ಸ್ ಮತ್ತು ಉತ್ತರ ದೆಹಲಿ ತಂಡಗಳು 23ನೇ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ದಕ್ಷಿಣ ದೆಹಲಿ ಸೂಪರ್‌ಸ್ಟಾರ್ಸ್ ತಂಡದ ಇಬ್ಬರು ಬ್ಯಾಟರ್‌ಗಳು ಸಿಡಿಲಬ್ಬರದ ಶತಕ ಬಾರಿಸಿದ್ದಾರೆ. ಈ ವೇಳೆ ತಂಡದ 23 ವರ್ಷದ ಓಪನರ್ ಪ್ರಿಯಾಂಶ್ ಆರ್ಯ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ತಂಡ ನಿಗದಿತ 20 ಓವರ್‌ಗಳಲ್ಲಿ 308 ರನ್ ದಾಖಲಿಸಿದೆ.
ತ್ತರ ದೆಹಲಿ ವಿರುದ್ಧದ ಪಂದ್ಯದಲ್ಲಿ ಮನನ್ ಭಾರದ್ವಾಜ್ ಬೌಲ್ ಮಾಡಿದ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿ ಪ್ರಿಯಾಂಶ್ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ 12ನೇ ಓವರ್‌ನಲ್ಲಿ ಪ್ರಿಯಾಂಶ್ ಪ್ರತಿ ಎಸೆತವನ್ನು ಸಿಕ್ಸರ್ಗಟ್ಟಿದರು. ಇದರೊಂದಿಗೆ ಡೆಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮೊದಲು ಪ್ರಿಯಾಂಶ್, ಡೆಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಪ್ರಿಯಾಂಶ್ ಆರ್ಯ ಡಿಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಲ್ಲದೆ, ರವಿಶಾಸ್ತ್ರಿ ಮತ್ತು ಯುವರಾಜ್ ಸಿಂಗ್ ನಂತರ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ.
ವಿಡಿಯೋ ವೀಕ್ಷಿಸಲು ಲಿಂಕ್ ಕ್ಲಿಕ್ ಮಾಡಿ…