ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯು ಪ್ರತೀ ವರ್ಷದಂತೆ ಈ ವರ್ಷವೂ ನವೆಂಬರ್ 1 ರಂದು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ನಗರದ ಕುವೆಂಪು ರಸ್ತೆಯಲ್ಲಿರುವ ಕಲಾಕುಂಚ ಕಛೇರಿಯ “ಕನ್ನಡ ಕೃಪಾ” ಹೊರಾಂಗಣದಲ್ಲಿ 69ನೇ ಕನ್ನಡ ರಾಜ್ಯೋತ್ಸವ, ಕನ್ನಡ ಧ್ವಜಾರೋಹಣದೊಂದಿಗೆ ಕಲಾಕುಂಚ ಮಹಿಳೆಯರಿಂದ ಕನ್ನಡ ಪೇಟಾ, ಕನ್ನಡ ಧ್ವಜಾ, ಕನ್ನಡ ಕಂಕಣದೊಂದಿಗೆ ದ್ವಿಚಕ್ರ ವಾಹನಯಾನ (ಬೈಕ್ ರ‍್ಯಾಲಿ) ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.
ಕಲಾಕುಂಚ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್‌ರವರು ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದು, ಕನ್ನಡ ತಾಯಿ ಶ್ರೀ ಭುವನೇಶ್ವರಿಯ ಪೂಜೆಯೊಂದಿಗೆ ನಡೆಯಲಿರುವ ಈ ಕನ್ನಡ ಹಬ್ಬಕ್ಕೆ ಸರ್ವ ಕನ್ನಡ ಮನಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಜೃಂಭಣೆಯ ಕನ್ನಡ ನಾಡು-ನುಡಿ ಸೇವೆ ಸಲ್ಲಿಸಲು ಆಗಮಿಸಿ ಯಶಸ್ವಿಗೊಳಿಸಬೇಕಾಗಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.
ನ.1 ರಂದು ಕಲಾಕುಂಚದಿಂದ 69ನೇ ಕನ್ನಡ ರಾಜ್ಯೋತ್ಸವ
RELATED ARTICLES