ನವದೆಹಲಿ: ಸತತ ಮೂರನೇ ಬಾರಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಮೋದಿಯವರ ಸಚಿವ ಸಂಪುಟದಲ್ಲಿ ಏಳು ಮಂದಿ ಮಾಜಿ ಮುಖ್ಯಮಂತ್ರಿಗಳು ಸ್ಥಾನ ಪಡೆದಿದ್ದಾರೆ.
ಪ್ರಧಾನಿಯಾಗುವ ಮೊದಲು ಸ್ವತಃ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಇನ್ನುಳಿದಂತೆ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಉತ್ತರ ಪ್ರದೇಶದ ಮಾಜಿ ಸಿಎಂ ರಾಜನಾಥ ಸಿಂಗ್, ಹರಿಯಾಣದ ಮಾಜಿ ಸಿಎಂ ಮನೋಹರ ಲಾಲ್ ಖಟ್ಟರ್, ಅಸ್ಸಾಂನ ಮಾಜಿ ಸಿಎಂ ಸರ್ಬಾನಂದ ನೋನವಾಲ್, ಕರ್ನಾಟಕದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಬಿಹಾರದ ಮಾಜಿ ಸಿಎಂ ಜೀತನ್ ರಾಮ್ ಮಾಂಝಿ ಪ್ರಧಾನಿ ಮೋದಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.
ಇವರಲ್ಲಿ ಕುಮಾರಸ್ವಾಮಿ ಜೆಡಿಎಸ್ ಮತ್ತು ಮಾಂಝಿ ಹಿಂದೂಸ್ತಾನಿ ಆವಂ ಮೋರ್ಚಾ ಪಕ್ಷದವರು. ಇನ್ನುಳಿದವರೆಲ್ಲಾ ಬಿಜೆಪಿಯವರು.