ಹಳೆಯಂಗಡಿ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಾದ ಡಾ.ಯತೀಶ್ ಸಸಿಹಿತ್ಲು, ಸುಮನ್ ಸುವರ್ಣ ಸಸಿಹಿತ್ಲು, ಡಾ.ಕೃತಿ, ಸಮಾಜ ಸೇವಕರಾದ ತುಕಾರಾಮ ಹಳೆಯಂಗಡಿ, ಬಶೀರ್, ನಿವೃತ್ತರಾದ ಅಂಗನವಾಡಿ ಶಿಕ್ಷಕಿ ಸುಜಾತ ಇಂದಿರಾನಗರ, ಆಶಾಕಾರ್ಯಕರ್ತೆ ಸುಶೀಲ ಇವರನ್ನು ಗುರುತಿಸಿ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಗ್ರಂಥಪಾಲಕರು, ಅಂಗನವಾಡಿ ಕಾರ್ಯಕರ್ತೆಯರು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

