ಮೂಡುಬಿದಿರೆ: ತಾಲೂಕು ಆಡಳಿತ ಸೌಧದಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ತಾಲೂಕು ತಹಸಿಲ್ದಾರ್ ಶ್ರೀಧರ್ ಎಂ. ಅವರು ಧ್ವಜಾರೋಹಣವನ್ನು ಗೈದರು. ಶಾಸಕ ಉಮಾನಾಥ ಕೋಟ್ಯಾನ್, ಎ ಸಿ ಎಫ್ ಶ್ರೀಧರ್, ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಪುರಸಭಾ ಅಧ್ಯಕ್ಷೆ ಜಯಶ್ರೀ,ಮುಖ್ಯಾಧಿಕಾರಿ ಇಂದು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ತಾಲೂಕಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪೊಲೀಸ್, ಎನ್.ಸಿ.ಸಿ, ಸ್ಕೌಟ್ ಗೈಡ್ಸ್, ಇತ್ಯಾದಿಯರ ಪಥ ಸಂಚಲನ ನಡೆಯಿತು.
ವರದಿ; ರಾಯಿ ರಾಜಕುಮಾರ ಮೂಡುಬಿದಿರೆ
ಮ

