ಬೆಳಾಲು ಗ್ರಾ.ಪಂ.ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

0
48

ಬೆಳಾಲು : ಬೆಳಾಲು ಗ್ರಾಮ ಪಂಚಾಯಿತ್ ನಲ್ಲಿ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ಪಂಚಾಯತ್ ಅಧ್ಯಕ್ಷರಾದ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರುಗಳು, ಪಂಚಾಯತ್ ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಊರಿನ ಗಣ್ಯರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಗದೀಶ್ ಸ್ವಾಗತಿಸಿ, ಗ್ರಂಥಪಾಲಕರು ಡೀಕಯ್ಯ ಗೌಡ ಕಾರ್ಯಕ್ರಮ ನಿರೂಪಿಸಿ ವಿಶೇಷ ಚೇತನರ ಪುನರ್ವಸತಿ ಕಾರ್ಯಕರ್ತ ಈರಣ್ಣ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here