Tuesday, May 13, 2025
Homeರಾಷ್ಟ್ರೀಯ8 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದ 13 ವರ್ಷದ ಮೂವರು ವಿದ್ಯಾರ್ಥಿಗಳು!

8 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆಗೈದ 13 ವರ್ಷದ ಮೂವರು ವಿದ್ಯಾರ್ಥಿಗಳು!

ಅಮರಾವತಿ: 8 ವರ್ಷದ ವಿದ್ಯಾರ್ಥಿನಿಯ ಮೇಲೆ 13 ವರ್ಷದ ಮೂವರು ಹಿರಿಯ ವಿದ್ಯಾರ್ಥಿಗಳು ಅತ್ಯಾಚಾರ ಎಸಗಿ, ಹತ್ಯೆಗೈದಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಮುಚ್ಚುಮರ್ರಿ ಎಂಬಲ್ಲಿ ಈ ಘಟನೆ ನಡೆದಿದೆ.
ಅಪ್ರಾಪ್ತ ವಯಸ್ಕ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯ ವೇಳೆ ಈ ಬಾಲಕರು ಅತ್ಯಾಚಾರ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹತ್ಯೆಯ ಬಳಿಕ ಬಾಲಕಿಯ ಶವವನ್ನು ಕಾಲುವೆಗೆ ಎಸೆದಿದ್ದಾರೆ. ಬಾಲಕಿಯ ಶವ ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮುಚ್ಚುಮರ್ರಿ ಪಾರ್ಕ್‌ನಲ್ಲಿ ಬಾಲಕಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಭಾನುವಾರ ಬಾಲಕಿ ಪಾರ್ಕಿನಿಂದ ನಾಪತ್ತೆಯಾಗಿದ್ದಳು. ಬಾಲಕಿ ನಾಪತ್ತೆಯಾದ ಬಗ್ಗೆ ಆಕೆಯ ತಂದೆ ದೂರು ನೀಡಿದ್ದರು. ಪೊಲೀಸರು ಈ ಬಗ್ಗೆ ಸ್ಥಳೀಯರನ್ನು ವಿಚಾರಿಸಿದಾಗ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಬಳಿಕ ಶ್ವಾನದಳವನ್ನು ಕರೆಸಿ, ಹುಡುಕಾಡಿದಾಗ ಮೂವರು ಅಪ್ರಾಪ್ತರ ಬಳಿ ಶ್ವಾನ ಕರೆದೊಯ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಬಳಿಕ ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ಇಬ್ಬರು ಬಾಲಕರು ಆರನೇ ತರಗತಿ ವಿದ್ಯಾರ್ಥಿಗಳಾಗಿದ್ದು, ಒಬ್ಬ ಏಳನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular