Monday, July 15, 2024
Homeಉಡುಪಿ80 ಬಡಗಬೆಟ್ಟು ಶಕ್ತಿ ಕೇಂದ್ರ ಸಭೆ - ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

80 ಬಡಗಬೆಟ್ಟು ಶಕ್ತಿ ಕೇಂದ್ರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

80 ಬಡಗಬೆಟ್ಟು ಶಕ್ತಿ ಕೇಂದ್ರದ ಸಭೆ ಇಂದು ದಿನಾಂಕ 29-03-2024 ರಂದು ಉಪೇಂದ್ರ ನಾಯಕ್ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು.

ಶಾಸಕರು ಮಾತನಾಡಿ ತಾನು ಪ್ರಧಾನಿಯಾದ ಕ್ಷಣದಿಂದ ದೇಶದ ಅಭಿವೃದ್ಧಿಗೆ ಬಗ್ಗೆ ಸಂಕಲ್ಪ ಮಾಡಿರುವ ವ್ಯಕ್ತಿ ಸನ್ಮಾನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ನಾವು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದರು.

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮ ಹಾಗೂ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿಯನ್ನು ಮತ್ತು ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ನಿವೃತ್ತ ಪೋಲಿಸ್ ಅಧಿಕಾರಿ ವಾಸಪ್ಪ ನಾಯ್ಕ್ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಉಪೇಂದ್ರ ನಾಯಕ್, ಸಂದೀಪ್ ಶೆಟ್ಟಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಕೋಟ್ಯಾನ್, ಉಪಾಧ್ಯಕ್ಷರಾದ ರೂಪಾ ನಾಯಕ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಬೊಮ್ಮರಬೆಟ್ಟು ಶಕ್ತಿ ಕೇಂದ್ರದ ಸಂಚಾಲಕರಾದ ದಯಾನಂದ ಪೂಜಾರಿ, ವಿನಯ್ ಪೂಜಾರಿ, ಸಹ ಸಂಚಾಲಕರಾದ ಸುನಿತಾ ನಾಯ್ಕ್, ಸುನಿಲ್ ಶೆಟ್ಟಿ, 80 ಬಡಗಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular