ವಿದ್ಯುತ್ ಶಾಕ್‌ಗೆ ಗುರಿಯಾಗಿ ಮೇಲಿಂದ ಬಿದ್ದು 9 ವರ್ಷದ ಬಾಲಕಿ ಮೃತ

0
57

ಚಿಕ್ಕೋಡಿ : ವಿದ್ಯುತ್ ಶಾಕ್ ತಗುಲಿ ಮನೆಯ ಮೇಲಿಂದ ಬಿದ್ದ ಪರಿಣಾಮ 9 ವರ್ಷದ ಬಾಲಕಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಸಾನ್ವಿ ಕಾಂಬಳೆ (9) ಎಂದು ಗುರುತಿಸಲಾಗಿದೆ. ಆಕೆ ಇಂಗಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ 3ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದಳು.

ನಿನ್ನೆ ಸಂಜೆ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ, ಮನೆಯ ಮೇಲಿದ್ದ ವಿದ್ಯುತ್ ತಂತಿಯ ಮೇಲೆ ಸ್ಕಿಪ್ಪಿಂಗ್ ಹಗ್ಗ ಬಿದ್ದಿತ್ತು. ಹಗ್ಗವನ್ನು ತೆಗೆದುಕೊಳ್ಳಲು ಮೇಲಕ್ಕೆ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ, ಮೇಲಿಂದ ಬಿದ್ದಿದ್ದಾಳೆ ಎಂದು ತಿಳಿದುಬಂದಿದೆ.

ತಕ್ಷಣ ಬಾಲಕಿಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

LEAVE A REPLY

Please enter your comment!
Please enter your name here