ಹೈದರಾಬಾದ್ : ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ, ಬೆಂಕಿ ಹೊತ್ತಿಕೊಂಡು 13 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶ ಮಾರ್ಕಪುರಂ ಜಿಲ್ಲೆಯಲ್ಲಿ ನಡೆದಿದೆ.
ಹರಿಕೃಷ್ಣ ಟ್ರಾವೆಲ್ಸ್‌ಗೆ ಸೇರಿದ ಬಸ್ ಹಾಗೂ ಜಲ್ಲಿ ತುಂಬಿದ್ದ ಟಿಪ್ಪರ್ ನಡುವೆ ಮಾರ್ಕಪುರಂ ಸಮೀಪದ ರಾಯವರಂ ಎಂಬಲ್ಲಿ ಅಪಘಾತವಾಗಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಎರಡೂ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಮಾರ್ಕಪುರಂ ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ಮುಖ್ಯ ಕಾರಣ ಟಿಪ್ಪರ್ ಲಾರಿಯ ಅತಿವೇಗದ ಚಾಲನೆಯೇ ಈ ಭೀಕರ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.• ಪ್ರಾಣಹಾನಿ ಮತ್ತು ರಕ್ಷಣೆಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಲ್ಲಿ 14 ಮಂದಿ ಬೆಂಕಿಗೆ ಆಹುತಿಯಾಗಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.ಪ್ರಮುಖ ಅಂಕಿಅಂಶಗಳು14ಮೃತಪಟ್ಟವರ ಸಂಖ್ಯೆ20ಕ್ಕೂ ಹೆಚ್ಚುಬಸ್ಸಿನಲ್ಲಿದ್ದ ಒಟ್ಟು ಪ್ರಯಾಣಿಕರುಬೆಳಿಗ್ಗೆ 6 – 6.30ಅಪಘಾತ ಸಂಭವಿಸಿದ ಸಮಯಎಐ ಬಳಸಿ ಸಂಸ್ಕರಿಸಲಾಗಿದೆ. ಪಿವಿ ಡಿಜಿಟಲ್ ತಂಡ ಪರಿಶೀಲಿಸಿದೆ.
ಪೊಲೀಸರು, ಆಗ್ನಿಶಾಮಕ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಟಿಪ್ಪರ್ ಲಾರಿ ಅತಿ ವೇಗದಲ್ಲಿ ಚಲಿಸುತ್ತಿತ್ತು. ಅದೇ ದುರಂತಕ್ಕೆ ಕಾರಣ. ಅಪಘಾತಕ್ಕೀಡಾದ ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಹಿಂದಿನ ಸೀಟುಗಳಲ್ಲಿ ಕುಳಿತಿದ್ದವರು, ತಪ್ಪಿಸಿಕೊಳ್ಳಲಾಗದೆ ಆಹುತಿಯಾಗಿದ್ದಾರೆ ಎಂದು ಅಂದಾಜಿಸಲಾಗಿದೆ.

