ಉಡುಪಿ : ಇಬ್ಬರು ರೌಡಿಶೀಟರ್‌ ಗಳಿಗೆ ಗಡಿಪಾರು ಆದೇಶ

0
94

ಉಡುಪಿ ಜಿಲ್ಲೆಯ ಇಬ್ಬರು ಆರೋಪಿಗಳಿಗೆ ಗಡಿಪಾರು ಆದೇಶ ಜಾರಿಗೊಳಿಸಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ ಹಾಗೂ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಮಾ.೨೬ರಂದು ಗಡಿಪಾರು ಆದೇಶ ಹೊರಡಿಸಿದ್ದಾರೆ.

ಶಿರ್ವ ಠಾಣಾ ವ್ಯಾಪ್ತಿಯ ಮಹಮ್ಮದ್ ನೌಫಿಲ್ (ತಂದೆ: ಅಬ್ದುಲ್ ಖಾದರ್), ಸೂರ್ಯಗುಡ್ಡೆ, ಕಳತ್ತೂರು ಗ್ರಾಮ, ಕಾಪು ತಾಲೂಕು ನಿವಾಸಿಯಾಗಿದ್ದು, ಈತನ ವಿರುದ್ಧ ಒಟ್ಟು 5 ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಶಿರ್ವ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ತೆರೆಯಲಾಗಿದೆ.

ಇದೇ ರೀತಿ ಮಲ್ಪೆ ಠಾಣಾ ವ್ಯಾಪ್ತಿಯ ಸುಹಾನ್ ಪೂಜಾರಿ (ತಂದೆ: ಸುನೇತ್ರ ಹೆಚ್), ಆಶೀರ್ವಾದ ಮನೆ, ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ, ಕೊಡವೂರು ಗ್ರಾಮ, ಮಲ್ಪೆ ನಿವಾಸಿಯಾಗಿದ್ದು, ಈತನ ವಿರುದ್ಧ 4 ಪ್ರಕರಣಗಳು ದಾಖಲಾಗಿವೆ.

ಮಹಮ್ಮದ್ ನೌಫಿಲ್ ಅವರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಸುಹಾನ್ ಪೂಜಾರಿ ಅವರನ್ನು ಯಾದಗಿರಿ ಜಿಲ್ಲೆಯ ಯಾದಗಿರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ. ಈ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here