ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ತಾ. 16.4.2026ರಿಂದ ತಾ. 20.4.2026ರಿಂದ ನಡೆಯಲಿರುವ ಬ್ರಹ್ಮಕಲಶೋತ್ಸವ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿರುವ ಸಂದರ್ಭದಲ್ಲಿ “ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವ ವೈಭವ-2026” ಕಾರ್ಯಕ್ರಮದ ನಿಮಿತ್ತ ಚಪ್ಪರ ಮುಹೂರ್ತ ಕಾರ್ಯಕ್ರಮವು ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಹೊರಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮವು ಮೊದಲಿಗೆ ಧಾರ್ಮಿಕ ವಿಧಿ ವಿಧಾನಗಳ ಮೂಲಕ ಪ್ರಾರಂಭಗೊಂಡು ನಂತರ ಅನೇಕ ಗಣ್ಯರ ಸಮ್ಮುಖದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮವು ಸಂಪನ್ನಗೊಂಡಿತು.

ಈ ಕಾರ್ಯಕ್ರಮದಲ್ಲಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಬಡಗುಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಜಯಕರ್ ಶೆಟ್ಟಿ ಇಂದ್ರಾಳಿ, ಜಯಲಕ್ಷ್ಮೀ ಸಿಲ್ಕ್ಸ್‌ನ ಮಾಲಕರಾದ ವೀರೇಂದ್ರ ಹೆಗ್ಗಡೆ, ಹೊರೆಕಾಣಿಕೆ ಸಮಿತಿಯ ಸಂಚಾಲಕರಾದ ಹರಿಯಪ್ಪ ಕೋಟ್ಯಾನ್, ಬ್ರಾಹ್ಮಣ ಮಹಾಸಭಾದ ತಾಲೂಕು ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯಸ್ಥ ಸುರೇಂದ್ರ ನಾಯಕ್, ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಪೂಜಾರಿ ಬನ್ನಂಜೆ, ಉದ್ಯಮಿ ಯೋಗೀಶ್ ಉದ್ಯಾವರ, ಅಂಬಲಪಾಡಿ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ರಾವ್, ಮಾಜಿ ನಗರಸಭಾ ಸದಸ್ಯರಾದ ಸವಿತಾ ಹರೀಶ್‌ರಾಮ್, ಪೆರ್ಣಂಕಿಲ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪಕರಾದ ಮಹೇಶ್ ಕುಲಕರ್ಣಿ, ಬನ್ನಂಜೆ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ವರದಿ ವಿನೋದ್ ಶೆಟ್ಟಿ ಉಡುಪಿ

