ಇಂದಿನಿಂದ IPL 19ನೇ ಸೀಸನ್ ಸ್ಟಾರ್ಟ್: RCB–SRH ಹೈವೋಲ್ಟೇಜ್ ಉದ್ಘಾಟನಾ ಪಂದ್ಯ

0
47

ಬೆಂಗಳೂರು : 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಕ್ರಿಕೆಟ್ ಹಬ್ಬ ಇಂದಿನಿಂದ (ಮಾರ್ಚ್ 28) ಅದ್ಧೂರಿಯಾಗಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್‌ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ತವರಿನ ಅಂಗಳವಾದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬ್ಲಾಕ್ ಬಸ್ಟರ್ ಪಂದ್ಯ ನಡೆಯಲಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಕಳೆದ ಸೀಸನ್‌ನಲ್ಲಿ ಆರ್‌ಸಿಬಿಗೆ ಮೊದಲ ಬಾರಿಗೆ ಟ್ರೋಫಿ ಗೆದ್ದುಕೊಟ್ಟಿದ್ದ ರಜತ್ ಪಾಟಿದಾರ್ ಈ ಬಾರಿಯೂ ತಂಡವನ್ನು ಮುನ್ನಡೆಸಲಿದ್ದಾರೆ. ಮತ್ತೊಂದೆಡೆ, ಯುವ ಆಟಗಾರ ಇಶಾನ್ ಕಿಶನ್ ಅವರು ಮೊದಲ ಬಾರಿಗೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕರಾಗಿ ಕಣಕ್ಕಿಳಿಯುತ್ತಿರುವುದು ವಿಶೇಷ.

ಐಪಿಎಲ್ ಆರಂಭಕ್ಕೂ ಮುನ್ನವೇ ಕಿಂಗ್ ಕೊಹ್ಲಿ ವಿರಾಟ್ ತಮ್ಮ ಖದರ್ ತೋರಿದ್ದಾರೆ. ಇತ್ತೀಚೆಗೆ ನಡೆದ ಅಭ್ಯಾಸ ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 45 ರನ್ ಚಚ್ಚುವ ಮೂಲಕ ಎದುರಾಳಿಗಳಿಗೆ ಎಚ್ಚರಿಕೆ ರವಾನಿಸಿದ್ದಾರೆ. ಕೊಹ್ಲಿಯವರ ಹೊಸ ಯೋಜನೆ ಮತ್ತು ಬ್ಯಾಟಿಂಗ್ ಶೈಲಿಯನ್ನು ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಆರ್‌ಸಿಬಿ ಪರ ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ಮತ್ತು ಜಿತೇಶ್ ಶರ್ಮಾ ಪ್ರಮುಖ ಅಸ್ತ್ರಗಳಾಗಿದ್ದಾರೆ. ಇತ್ತ ಹೈದರಾಬಾದ್ ಪರ ಸ್ಫೋಟಕ ಬ್ಯಾಟರ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ ಮತ್ತು ಹೆನ್ರಿಕ್ ಕ್ಲಾಸೆನ್ ಅಬ್ಬರಿಸಲು ಸಜ್ಜಾಗಿದ್ದಾರೆ.

LEAVE A REPLY

Please enter your comment!
Please enter your name here