ಕೊಣಾಜೆ : ಅಸೈಗೋಳಿ ಸಮೀಪದ ತಿಬ್ಬಪದವು ಮಸೀದಿ ಸಭಾಂಗಣದ ಬಳಿ ಕಾರು ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.
ಕೊಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುಮಾರು 10 ಅಡಿ ಆಳಕ್ಕೆ ಜಿಗಿದು, ಸಭಾಂಗಣ ಕಟ್ಟಡದ ಗೋಡೆಗೆ ಅಪ್ಪಳಿಸಿ ಕೆಳಗೆ ಉರುಳಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

