ಉಡುಪಿ : ಕಕ್ಕುಂಜೆ ಪಾಸ್ಟರಲ್ ಸೆಂಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 132ನೇ ‘ಮನ್ ಕೀ ಬಾತ್’ ನೇರ ಪ್ರಸಾರದ ಸಾಮೂಹಿಕ ವೀಕ್ಷಣೆ

0
58

ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಸಂಯೋಜನೆಯಲ್ಲಿ ಮಾ.29ರಂದು ಉಡುಪಿ ಕಕ್ಕುಂಜೆಯ ಪಾಸ್ಟರಲ್ ಸೆಂಟರ್ ‘ಅನುಗ್ರಹ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 132ನೇ ‘ಮನ್ ಕೀ ಬಾತ್’ ಕಾರ್ಯಕ್ರಮದ ನೇರ ಪ್ರಸಾರದ ಸಾಮೂಹಿಕ ವೀಕ್ಷಣೆಯು ಉಡುಪಿ ಜಿಲ್ಲಾ ಕೆಥೋಲಿಕ್ ಧರ್ಮ ಪ್ರಾಂತ್ಯದ ವಿವಿಧ ಧರ್ಮಗುರುಗಳ ಉಪಸ್ಥಿತಿಯಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಭಾರತೀಶ್, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ರುಡಾಲ್ಫ್ ಡಿಸೋಜ, ರಾಜ್ಯ ಕಾರ್ಯದರ್ಶಿ ಜೆಸಲ್ ಡಿಸೋಜ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ ಪೂಜಾರಿ, ಜಿಲ್ಲಾ ಕೆಥೋಲಿಕ್ ಸಭಾ ಅಧ್ಯಕ್ಷ ಮೆಲ್ವಿನ್ ಶಿರ್ವ, ನಿಕಟಪೂರ್ವ ಅಧ್ಯಕ್ಷ ರೊನಾಲ್ಡ್ ಡಿ. ಅಲ್ಮೇಡಾ ಉದ್ಯಾವರ, ಮಾಜಿ ಅಧ್ಯಕ್ಷ ಸಂತೋಷ್ ಕರ್ನೋಲಿಯೋ, ಲೆಸ್ಲಿ ಅರೋಜಾ ತೊಟ್ಟo, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷರಾದ ಮೈಕಲ್ ಡಿಸೋಜ, ಜೆರಾಲ್ಡ್ ಸೂಡ, ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಉಚ್ಚಿಲ, ಶೇಖ್ ಆಸಿಫ್ ಕಟಪಾಡಿ, ಕೋಶಾಧಿಕಾರಿ ಗ್ಲೆನ್ ಮೋನಿಸ್, ಮೋರ್ಚಾದ ಮಾಜಿ ರಾಜ್ಯ ಕಾರ್ಯದರ್ಶಿ ಸಲೀಂ ಅಂಬಾಗಿಲು, ಮಾಜಿ ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ, ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾದ ನವೀನ್ ಡಿಸೋಜ, ಅನಿಲ್ ಅಂಬಲಪಾಡಿ, ಜಸಿಂತಾ, ಜಾನ್ಸನ್, ಮೆಲ್ವಿನ್, ಮೋರ್ಚಾದ ಮಂಡಲ ಪದಾಧಿಕಾರಿಗಳು ಹಾಗೂ ಧರ್ಮ ಭಗಿನಿಯರ ಸಹಿತ 100ಕ್ಕೂ ಮಿಕ್ಕಿ ಅಲ್ಪಸಂಖ್ಯಾತ ಕುಟುಂಬಗಳ ಸದಸ್ಯರು ಉಪಸ್ಥಿತರಿದ್ದರು.

‘ಮನ್ ಕೀ ಬಾತ್’ ಜಿಲ್ಲಾ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here